ಉಡುಪಿ ಪ್ರಾದೇಶಿಕ ವಿಭಾಗದ ಉತ್ತರ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಮಹೇಶ್ ಬಾಬು ರಾಯ ನಾಯ್ಕ ಮತ್ತು ಉಪಾಧ್ಯಕ್ಷರಾದ ಶ್ರೀ ವಾಸುದೇವ ನಾರಾಯಣ ನಾಯಕ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಶ್ರೀ ಯೋಗಾನಂದ ಗಾಂಧಿ, ಜಿಲ್ಲಾ ಕಾರ್ಯದರ್ಶಿ ಶ್ರೀ ಮಹೇಶ್, ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ, ಜಿಲ್ಲಾ ಜನಜಾಗೃತಿ ಪದಾಧಿಕಾರಿಗಳು ಮತ್ತು ಕ್ಷೇತ್ರ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಕಾರವಾರ,ಅಂಕೋಲಾ, ಕುಮಟ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳು ತಮ್ಮ ತಾಲೂಕಿನ 2024-25ನೇ ಸಾಲಿನ ಸಾಧನಾ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು 2025-26ನೇ ಆರ್ಥಿಕ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಕ್ರಿಯಾಯೋಜನೆ ಕುರಿತು ಮಾಹಿತಿ ನೀಡಿದರು.
