ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದ 1917 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಎ. ಸಿ. ಚಂದ್ರಪ್ಪ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಎ. ಟಿ. ಶ್ರೀನಿವಾಸ್, ಅಜ್ಜಂಪುರ ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀ ಸಂಜೀವ ಗೌಡ, ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ನಾಗರಾಜ್ ಕುಲಾಲ್, ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
