ಚಿಕ್ಕಮಗಳೂರು ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅವತಿ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚಿಕ್ಕಮಗಳೂರು 01 ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಜೋಳದಾಳ ಗ್ರಾಮ ಪಂಚಾಯಿತಿ, ಮತ್ತು ಸಮುದಾಯ ಭವನ ಸಮಿತಿ, ಜೋಳದಾಳ ಗ್ರಾಮಸ್ಥರು, ಗ್ರಾಮಾಂತರ ಪೊಲೀಸ್ ಠಾಣೆ ಚಿಕ್ಕಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ಅವತಿ , ತಾಲೂಕು ಕನ್ನಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಿಕ್ಕಮಗಳೂರು , ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅವತಿ ವಲಯ, ನವಜೀವನ ಸಮಿತಿ ಸದಸ್ಯರುಗಳು ಚಿಕ್ಕಮಗಳೂರು ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ದಾನಿಗಳು ಇವರ ಸಹಯೋಗದೊಂದಿಗೆ 1932 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ತಾಲೂಕಿನ ಸಮುದಾಯ ಭವನ ಜೋಳದಾಳ ನಲ್ಲಿ ನಡೆಯಿತು.
ಶ್ರೀ ಡಾ: ಶ್ರೀ ಜೆ ಸಿ ಕೃಷ್ಣೇಗೌಡರು ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.
ಶ್ರೀ ಬಿ ಇ ನಾಗೇಶ್ ಬೈಗೂರ್, ಅಧ್ಯಕ್ಷರು 1932ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಜೋಳದಾಳ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.
ಶ್ರೀ ಸದಾನಂದ ಬಂಗೇರ ಸರ್ ಮಾನ್ಯ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಚಿಕ್ಕಮಗಳೂರು ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ. ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.
ಶ್ರೀಮತಿ ರೂಪ ಜಿ ಜೈನ್ ಯೋಜನಾಧಿಕಾರಿಗಳು ಸ್ವಾಗತಿಸಿ, ಮೇಲ್ವಿಚಾರಕರು ನಿರೂಪಿಸಿ, ವಂದಿಸಿದರು.