ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 250ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಜನಜಾಗ್ರತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ವಿಶೇಷ ಮಧ್ಯವರ್ಜನ ಶಿಬಿರದ ರೂಪರೇಷೆ ಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ವೈದ್ಯಾಧಿಕಾರಿಗಳಾದ ಮೋಹನ್ ದಾಸ್ ಗೌಡ ನೆರವೇರಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಡಳಿತಾತ್ಮಕ ಯೋಜನಾಧಿಕಾರಿ ಮಾಧವ ಗೌಡ ಜಾಗೃತಿ ಸೌಧ ಕಟ್ಟಡದ ಪ್ರಬಂಧಕರು ಶ್ರೀಯುತ ಕಿಶೋರ್ ಕುಮಾರ್ ಆಪ್ತ ಸಮಾಲೋಚಕರು ಮಧು ಶಿಬಿರಾಧಿಕಾರಿ ಆರೋಗ್ಯ ಸಹಾಯಕರು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
