ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧಾರವಾಡ ಜಿಲ್ಲೆಯ ಜಿಲ್ಲಾ ಸಮಿತಿಯ ಸಭೆಯು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಸಂತ ಅರ್ಕಚಾರ ರವರು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು ಧಾರವಾಡ ಜಿಲ್ಲಾ ನಿರ್ದೇಶಕರಾದ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.ಧಾರವಾಡ ಜಿಲ್ಲೆಯ ಜನಜಾಗೃತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದು ಉತ್ತಮ ಸಲಹೆ ನೀಡಿದರು , ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಶೆಟ್ಟಿ ಹಾಗೂ ಧಾರವಾಡ ಪ್ರಾದೇಶಿಕ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ಭಾಸ್ಕರ ಎನ್ ವರದಿ ವರ್ಷದ ಕ್ರಿಯಾಯೋಜನೆಗೆ ಪೂರಕವಾದ ಮಾಹಿತಿಗಳನ್ನು ಸಭೆಗೆ ಮಂಡಿಸಿ ಅನುಮೋದನೆ ಪಡೆಯಲಾಯಿತು. ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ತಾಲೂಕಿನ ಯೋಜನಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಧಾರವಾಡ ಜಿಲ್ಲಾ ನಿರ್ದೇಶಕರು ಎಲ್ಲಾರನ್ನು ಸ್ವಾಗತಿಸಿದರು. ಪ್ರಾದೇಶಿಕ ಜನಜಾಗೃತಿ ವೇದಿಕೆ ವಿಭಾಗದ ಯೋಜನಾಧಿಕಾರಿ ಭಾಸ್ಕರ್ ಎನ್ ಗತ ಸಭೆಯ ವರದಿ ಮಂಡಿಸಿದರು. ಕೊನೆಯಲ್ಲಿ ಯೋಜನಾಧಿಕಾರಿ ಸೋಮಲಿಂಗ ರವರು ವಂದಿಸಿದರು. ಸಭೆಯು ಹುಬ್ಬಳ್ಳಿಯ ಸಿದ್ದಾರೂಢ ಮಠದಲ್ಲಿ ನಡೆಯುತ್ತಿರುವ ಮಧ್ಯವರ್ಜನ ಶಿಬಿರದ ಸ್ಥಳದಲ್ಲಿ ನಡೆದು ಅರ್ಥಪೂರ್ಣವಾಯಿತು.
