1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike Uncategorized

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-2 ಜಿಲ್ಲೆಯ ಚಿಕ್ಕನಾಯಕನಹಳ್ಳಿ ಯೋಜನಾ ಕಛೇರಿವ್ಯಾಪ್ತಿಯ ಸಾದರಹಳ್ಳಿ ಕಾರ್ಯ ಕ್ಷೇತ್ರದ ಶ್ರೀ ಲಕ್ಷ್ಮಿರಂಗನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 1942ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ ಸರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳಬಗ್ಗೆ ಮತ್ತು ಶಿಬಿರಕ್ಕೆ ಸೇರಿ ಪಾನಮುಕ್ತರಾಗಿ ಸಾಧನೆ ಮಾಡಿರುವಂತಹ ನವಜೀವನ ಸಮಿತಿ ಸದಸ್ಯರ ಯಶೋಗಾಥೆಗಳಬಗ್ಗೆ ತಿಳಿಸಿ ಶಿಬಿರಾರ್ಥಿಗಳು ಹಾಗೂ ಶಿಬಿರಾರ್ಥಿಗಳ ಕುಟುಂಬಸ್ಥರಿಗೆ ಮಾಹಿತಿ ಮತ್ತು ಮಾರ್ಗದರ್ಶನ್ನು ನೀಡಿದರು.