ವಿಶೇಷ ಮದ್ಯವರ್ಜನ ಶಿಬಿರಕ್ಕೆ ಪೂಜ್ಯರ ಭೇಟಿ

Janajagurthi Vedike

ಬೆಳ್ತಂಗಡಿ: ಮದ್ಯಪಾನವೆಂಬ ಚಟವು ವ್ಯಕ್ತಿಯ ದೈಹಿಕ, ಮಾನಸಿಕ, ಕೌಟುಂಬಿಕ ಹಾಗೂ ಸಾಮಾಜಿಕ ಜೀವನದ ಮೇಲೆ ತೀವ್ರ ಪರಿಣಾಮ ಬೀರುವ ಸಮಸ್ಯೆಯಾಗಿದೆ. ಮನುಷ್ಯ ಕೆಟ್ಟವನಲ್ಲ, ಆದರೆ ಆತನ ಕೆಟ್ಟ ಅಭ್ಯಾಸಗಳು ಆತನ ಜೀವನವನ್ನು ಸಂಕಷ್ಟಕ್ಕೆ ದೂಡುತ್ತವೆ. ಆದ್ದರಿಂದ ದುಶ್ಚಟಗಳಿಂದ ದೂರವಿದ್ದು, ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 281ನೇ ವಿಶೇಷ ಮದ್ಯವರ್ಜನ ಶಿಬಿರಕ್ಕೆ ಆಗಮಿಸಿದ …

2139ನೇ ಮದ್ಯವರ್ಜನ ಶಿಬಿರದ 5ನೇ ದಿನದ ಕಾರ್ಯಕ್ರಮ: ನವಜೀವನ ಸಮಿತಿಯ ಮಹತ್ವ ಮತ್ತು ಸಾಧನೆಯ ಜೀವನದ ಕುರಿತು ಮಾರ್ಗದರ್ಶನ ತೀರ್ಥಹಳ್ಳಿ

Janajagurthi Vedike

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-1 ತಾಲ್ಲೂಕಿನ ಚೋಕ್ಕೋಡ ಬೈಲಿನ ಶ್ರೀ ರಾಮಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ 2139ನೇ ಮದ್ಯವರ್ಜನ ಶಿಬಿರದ 5ನೇ ದಿನದ ಕಾರ್ಯಕ್ರಮವು ಶಿಬಿರಾರ್ಥಿಗಳಲ್ಲಿ ಹೊಸ ಭರವಸೆ, ಆತ್ಮವಿಶ್ವಾಸ ಮತ್ತು ಉತ್ತಮ ಜೀವನ ನಡೆಸುವ ಸಂಕಲ್ಪವನ್ನು ಮೂಡಿಸಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಮದ್ಯವರ್ಜನ ಶಿಬಿರಗಳು ಮದ್ಯಪಾನ ವ್ಯಸನದಿಂದ ಸಂಕಷ್ಟಕ್ಕೆ ಒಳಗಾದ ವ್ಯಕ್ತಿಗಳಿಗೆ …

ಕಡಬ ತಾಲ್ಲೂಕಿನ ವಿದ್ಯಾರಶ್ಮಿ ವಿದ್ಯಾಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆ

Janajagurthi Vedike

ವಿದ್ಯಾರಶ್ಮಿ ವಿದ್ಯಾಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟನೆ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ದುಶ್ಚಟಮುಕ್ತ ಸಮಾಜದ ಅರಿವು ಮೂಡಿಸುವ ಉದ್ದೇಶ ಸವಣೂರು:ಕಡಬ ತಾಲ್ಲೂಕಿನ ಸವಣೂರು ವಲಯದ ವಿದ್ಯಾರಶ್ಮಿ ವಿದ್ಯಾಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶಯದಂತೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.ಕಾರ್ಯಕ್ರಮದಲ್ಲಿ ಮಾನ್ಯ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, …

ನವಜೀವನ ಸದಸ್ಯರ ಸಮಾವೇಶ ಹಾಗೂ ಗಾಂಧಿ‌ ಸ್ಮೃತಿ ಮತ್ತು ಜಾಥಾ ಕಾರ್ಯಕ್ರಮ

Janajagurthi Vedike

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ( ರಿ) ಅಥಣಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಥಣಿ ಜಿಲ್ಲೆ ನವಜೀವನ ಸಮಿತಿ ಸದಸ್ಯರು ಅಥಣಿ ಜಿಲ್ಲೆ ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟಗಳು ಮೂಡಲಗಿ ತಾಲೂಕು ಮೂಡಲಗಿ ತಾಲೂಕು ಎಲ್ಲ ಪತ್ರಕರ್ತರ ಸಂಘಗಳು ಮೂಡಲಗಿ ಸಹಕಾರಿ ಸಂಘಗಳ ಒಕ್ಕೂಟ ನಿಯಮಿತ ಮೂಡಲಗಿ ಕಲ್ಮೇಶ್ವರ ಕಮಿಟಿ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನವಜೀವನ ಸದಸ್ಯರ ಸಮಾವೇಶ ಹಾಗೂ ಗಾಂಧಿ‌ ಸ್ಮೃತಿ ಮತ್ತು ಜಾಥಾ ಕಾರ್ಯಕ್ರಮವನ್ನು ಮೂಡಲಗಿ‌ ಗುಡ್ಲಮಡ್ಡಿ ಶ್ರೀ …

ಗಾಂಧಿ ಸ್ಮರಣೆ ವ್ಯಸನ ಮುಕ್ತರಿಗೆ ಅಭಿನಂದನೆ & ಸನ್ಮಾನ ಕಾರ್ಯಕ್ರಮ

Janajagurthi Vedike

ಪಾನಮುಕ್ತ ಸದಸ್ಯರು ಸಮಾಜದಲ್ಲಿ ಜೀವನ ನಡೆಸುವಾಗ ಸಂಸ್ಕಾರ ಸಂಸ್ಕೃತಿ ರೂಪಿಸಿಕೊಳ್ಳಬೇಕು ಶ್ರೀ ಕೆ. ನೇಮಿರಾಜನಾಯ್ಕ ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ *ಶ್ರೀಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪ ರಾಮನಗರ ಹಗರಿಬೊಮ್ಮನಹಳ್ಳಿ* ಸಭಾಭವನದಲ್ಲಿ ಗಾಂಧಿ ಸ್ಮರಣೆ ವ್ಯಸನ ಮುಕ್ತರಿಗೆ ಅಭಿನಂದನೆ & ಸನ್ಮಾನ ಕಾರ್ಯಕ್ರಮವನ್ನು *ಶ್ರೀ ಷ. ಬ್ರ. ಶಿವಲಿಂಗರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ನವಲಿ ಕಟ್ಟಿಮನಿ ಹಿರೇಮಠ, ಹಂಪಸಾಗರ* ಪೂಜ್ಯರ ದಿವ್ಯ ಸಾನಿಧ್ಯದಲ್ಲಿ ನಡೆಸಲಾಯಿತು.ಹಗರಿಬೊಮ್ಮನಹಳ್ಳಿ ನಗರದಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ …

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2131ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike

ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ 2131ನೇ ಮದ್ಯವರ್ಜನ ಶಿಬಿರ ವ್ಯವಸ್ಧಾಪನ ಸಮಿತಿ ಮಧುಗಿರಿ ತಾಲ್ಲೋಕು, ಇವರ ಸಂಯುಕ್ತ ಆಶ್ರಯದಲ್ಲಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಮಧುಗಿರಿ ತಾಲ್ಲೋಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು -2 ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ.ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಸವನಹಳ್ಳಿ ವಲಯ, …

2125ನೇ ಮದ್ಯವರ್ಜನ ಶಿಬಿರದ 5 ನೇ ದಿನದಲ್ಲಿ ಗೌರವಾನ್ವಿತ ಶ್ರೀಮತಿ ಶ್ರದ್ದಾ ಅಮಿತ್ ರವರು, ಟ್ರಸ್ಟಿಗಳು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ಷೇಮವನ ಬೆಂಗಳೂರು. ಭಾಗವಹಿಸಿ ಶಿಭಿರಾರ್ಥಿಗಳಿಗೆ ಆಶೀರ್ವಾದ ಪೂರ್ವಕ ಮಾಹಿತಿ ಮತ್ತು ಮಾರ್ಗದರ್ಶನ

Janajagurthi Vedike

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು-1 ಜಿಲ್ಲೆಯ ತುಮಕೂರು ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ಳಾವಿ ವಲಯದ ಶ್ರೀ ಚನ್ನಕೇಶವ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 2125ನೇ ಮದ್ಯವರ್ಜನ ಶಿಬಿರದ 5ನೇ ದಿನದ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.ಶಿಬಿರದ 5ನೇ ದಿನದ ಕಾರ್ಯಕ್ರಮದಲ್ಲಿ **ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ಬೆಳ್ತಂಗಡಿಯ ಟ್ರಸ್ಟಿಗಳಾದ ಹಾಗೂ ಕ್ಷೇಮವನ, ಬೆಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗೌರವಾನ್ವಿತ ಶ್ರೀಮತಿ ಶ್ರದ್ದಾ ಅಮಿತ್** ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಆಶೀರ್ವಾದಪೂರ್ವಕವಾಗಿ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಶ್ರದ್ದಾ ಅಮಿತ್ ಅವರು, ಮದ್ಯವರ್ಜನ …

ಗೋಕಾಕ -2127 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

Janajagurthi Vedike

ಗೋಕಾಕ -2127 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ..ಗೋಕಾಕ -2127 ನೇ ಮದ್ಯವರ್ಜನ ಶಿಬಿರ ಇಂದು ಆರಂಭಗೊಂಡಿತು.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ. ಮ. ನಿ. ಪ್ರ. ಸ್ವ. ವಿರೂಪಾಕ್ಷ ಮಹಾಸ್ವಾಮಿಗಳು, ಹೊಸಮಠ ಘಟಪ್ರಭಾ ಇವರು ವಹಿಸಿಕೊಂಡು ಆಶೀರ್ವಾಚನ ನೀಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಡಾ :- ಬಿ. ಕೆ. ಎಚ್ ಪಾಟೀಲ ಸಿ. ಇ. ಓ. ಶ್ರೀ ಜೆ.ಜಿ. ಸಹಕಾರಿ ಆಸ್ಪತ್ರೆ ಘಟಪ್ರಭಾ ಇವರು ನಡೆಸಿಕೊಟ್ಟು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿದರು.ಜಿಲ್ಲಾ ನಿರ್ದೇಶಕರು ಶ್ರೀ ಲವಕುಮಾರ ಸರ್ ರವರು ಪ್ರಾಸ್ತವಿಕ ನುಡಿಗಳನ್ನಾಡಿದರು,ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಶ್ರೀ …

ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike

ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಹಗರಿಬೊಮ್ಮನಹಳ್ಳಿ ತಾಲೂಕು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಶಿವಪ್ಪ ನಾಯಕ ಕಾವಲಿ ಅವರು ವಹಿಸಿದ್ದರು.ಸಭೆಯಲ್ಲಿ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ, ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು ಹಾಗೂ ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಜಿಲ್ಲೆಯಾದ್ಯಂತ ಜನಜಾಗೃತಿ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಅನುಷ್ಠಾನ, ಪ್ರಗತಿ ಹಾಗೂ ಮುಂದಿನ ದಿನಗಳಲ್ಲಿ …

ಮಂಡ್ಯ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕ ಸಭೆ

Janajagurthi Vedike

ಮಂಡ್ಯ ಜಿಲ್ಲಾ ಜನಜಾಗೃತಿ ವೇದಿಕೆಯ 2026-27ನೇ ಸಾಲಿನ ದ್ವಿತೀಯ ತ್ರೈಮಾಸಿಕದ ಸಭೆಯು ಮದ್ದೂರು ತಾಲೂಕಿನ ಮದ್ದೂರು ಟಿಫಾನೀಸ್ ಹೋಟೆಲ್‌ನ ಸಭಾಭವನದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಹನುಮಂತಯ್ಯ ಕೊಣನೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯದರ್ಶಿಯಾದ ಶ್ರೀಮತಿ ಚೇತನಾ ಮೇಡಂ ಅವರು ಉಪಸ್ಥಿತರಿದ್ದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ಚರ್ಚಿಸಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಬಳಿಕ ಗತಸಭೆಯ ವರದಿಯನ್ನು ಸಭೆಯ ಮುಂದೆ ಮಂಡಿಸಿ, ಅದರ ಅನುಷ್ಠಾನದ ಕುರಿತು ವಿವರಿಸಿದರು. ಸಭೆಯಲ್ಲಿ …