ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧಾರವಾಡ ಜಿಲ್ಲೆಯ ಜಿಲ್ಲಾ ಸಮಿತಿಯ ಸಭೆಯು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಸಂತ ಅರ್ಕಚಾರ ರವರು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು ಧಾರವಾಡ ಜಿಲ್ಲಾ ನಿರ್ದೇಶಕರಾದ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.ಧಾರವಾಡ ಜಿಲ್ಲೆಯ ಜನಜಾಗೃತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದು ಉತ್ತಮ ಸಲಹೆ ನೀಡಿದರು , ಜಿಲ್ಲಾ ಕಾರ್ಯದರ್ಶಿಗಳಾದ ಪ್ರದೀಪ್ ಶೆಟ್ಟಿ ಹಾಗೂ ಧಾರವಾಡ ಪ್ರಾದೇಶಿಕ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ಭಾಸ್ಕರ ಎನ್ ವರದಿ ವರ್ಷದ ಕ್ರಿಯಾಯೋಜನೆಗೆ ಪೂರಕವಾದ ಮಾಹಿತಿಗಳನ್ನು …
1933ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ
ಧಾರವಾಡ ಪ್ರಾದೇಶಿಕ ವಿಭಾಗದಲ್ಲಿ ಹಾವೇರಿ ಜಿಲ್ಲಾ ಕಚೇರಿ ವ್ಯಾಪ್ತಿಯ ರಾಣೇಬೆನ್ನೂರ್ ರಲ್ಲಿ ನಡೆಯುತ್ತಿರುವ 1933ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘಟನಾ ರಾಜ್ಯ ಅಧ್ಯಕ್ಷರು ಶ್ರೀ ನಟರಾಜ್ ಭಾದಾಮಿ ಸರ್ ಅವರು ಮಾಹಿತಿ & ಮಾರ್ಗದರ್ಶನ ಮಾಡಿರುತ್ತಾರೆ.
250ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 250ನೇ ವಿಶೇಷ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಜನಜಾಗ್ರತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ವಿಶೇಷ ಮಧ್ಯವರ್ಜನ ಶಿಬಿರದ ರೂಪರೇಷೆ ಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ವೈದ್ಯಾಧಿಕಾರಿಗಳಾದ ಮೋಹನ್ ದಾಸ್ ಗೌಡ ನೆರವೇರಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಡಳಿತಾತ್ಮಕ ಯೋಜನಾಧಿಕಾರಿ ಮಾಧವ ಗೌಡ ಜಾಗೃತಿ ಸೌಧ ಕಟ್ಟಡದ ಪ್ರಬಂಧಕರು ಶ್ರೀಯುತ …
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ
ಶಹಾಪುರ ತಾಲೂಕಿನ ಹೋತಪೇಟ ವಲಯದ ಬಿ ಗುಡಿ ಕಾರ್ಯಕ್ಷೇತ್ರದ ಕೃಷಿ ವಿಶ್ವವಿದ್ಯಾಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ.11.06.2025 ರಂದು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಮೊದಲಿಗೆ ಸಸಿಗೆ ನೀರು ಉಣಿಸುವ ಮೂಲಕ ಕೃಷಿ ವಿಶ್ವವಿದ್ಯಾಲಯದ ಡೀನ ಆದ ಡಾಕ್ಟರ ಪ್ರಕಾಶ್ ಕುಚುನೂರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಯುತ ಕಲ್ಲಪ್ಪ.ಯಾವಗಲ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವಂತಹ ಕಾರ್ಯಕ್ರಮಗಳ ಕುರಿತು ಪ್ರಾಸ್ತವಿಕವಾಗಿ ಮಾತನಾಡಿದರು. ನಂತರ ಸಂಪನ್ಮೂಲ ವ್ಯಕ್ತಿಯದ ರಾಮ್ ರಾವ್ ಕುಲಕರ್ಣಿ ಸರ್. ಅವರು ದುಶ್ಚಟಗಳಿಂದ …
932ನೇ ಮದ್ಯವರ್ಜನ ಶಿಬಿರದ ಕುಟುಂಬದಿನ ಕಾರ್ಯಕ್ರಮ
ಚಿಕ್ಕಮಗಳೂರು 1 ತಾಲೂಕಿನಲ್ಲಿ ನಡೆದ 1932ನೇ ಮದ್ಯವರ್ಜನ ಶಿಬಿರದ ಕುಟುಂಬದಿನ ಕಾರ್ಯಕ್ರಮವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್ ನಡೆಸಿ ಕೊಟ್ಟರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು. ಒಟ್ಟು 44 ಶಿಬಿರಾರ್ಥಿಗಳು ದಂಪತಿ ಸಮೇತ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.
249ನೇ ವಿಶೇಷ ಮದ್ಯವರ್ಜನ ಶಿಬಿರ
249ನೇ ವಿಶೇಷ ಮದ್ಯವರ್ಜನ ಶಿಬಿರದ 6ನೇ ದಿನದ ಮಾಹಿತಿ ಮಾರ್ಗದರ್ಶನ ಸಲಹೆಯನ್ನು ಜನಜಾಗೃತಿ ಪ್ರಾದೇಶಿಕ ವಿಭಾಗ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಅವರು ನಡೆಸಿಕೊಟ್ಟರು.
1930ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ
ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಕಾಸರಗೋಡು ತಾಲೂಕಿನ ಶ್ರೀ ಶಾರದಾಂಭ ಕಲ್ಯಾಣ ಮಂಟಪ ಅಣಂಗೂರಿನಲ್ಲಿ ನಡೆಯುತ್ತಿರುವ 1930ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ವಿಶೇಷ ಮದ್ಯವರ್ಜನ ಶಿಬಿರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೆಶ್ವರ ವ್ಯಸನ ಮುಕ್ತಿ ಸಂಶೋಧನೆ ಕೇಂದ್ರ ಉಜಿರೆ ಧರ್ಮಸ್ಥಳ ಜಾಗೃತಿ ಸೌಧದಲ್ಲಿ ನೆಡೆಯುತ್ತಿರುವ 249ನೇ ವಿಶೇಷ ಮದ್ಯವರ್ಜನ ಶಿಬಿರದಲ್ಲಿ ಜನ ಜಾಗೃತಿ ಪ್ರಾದೇಶಿಕ ನಿರ್ದೇಶಕರು ಮಾನ್ಯ ವಿವೇಕ್ ವಿನ್ಸೆಂಟ್ ಪಾಯಸ್ ಸರ್ ಶಿಬಿರರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು
ಚಿಕ್ಕಮಗಳೂರು ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ
ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅವತಿ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಚಿಕ್ಕಮಗಳೂರು 01 ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಜೋಳದಾಳ …
1930ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಜಿಲ್ಲಾ ನವಜೀವನ ಸಮಿತಿ ಕಾಸರಗೋಡು ಇವರ ವತಿಯಿಂದ ನಡೆಯುತ್ತಿರುವ 1930ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ.









