ಕಲಬುರಗಿ ಪ್ರಾದೇಶಿಕ ವಿಭಾಗದ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಮಹತ್ವದ ಸಭೆ ಇತ್ತೀಚೆಗೆ ನಡೆಯಿತು. ಶ್ರೀ ನಾಗರತ್ನ ಅನುಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಶ್ರೀ ವಿವೇಕ್ ವಿ. ಪಾಯಸ್, ಜನಜಾಗೃತಿ ಪ್ರಾದೇಶಿಕ ನಿರ್ದೇಶಕರು, ಶ್ರೀ ದಿನೇಶ್ ಪೂಜಾರಿ, ಕಲಬುರಗಿ ಪ್ರಾದೇಶಿಕ ನಿರ್ದೇಶಕರು ಹಾಗೂ ಶ್ರೀ ವಸಂತಗೌಡ, ಯಾದಗಿರಿ ಜಿಲ್ಲಾ ನಿರ್ದೇಶಕರು ಉದ್ಘಾಟಿಸಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಉಪಾಧ್ಯಕ್ಷರು, ಜನಜಾಗೃತಿ ವೇದಿಕೆಯ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ಜನಜಾಗೃತಿ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಗ್ರಾಮಮಟ್ಟಕ್ಕೆ ತಲುಪಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.ಸಭೆಯ ಪ್ರಮುಖ …
ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಕೆ ಬೆಟ್ಟಹಳ್ಳಿ ವಲಯದ ಬೇಬಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕರು ಶ್ರೀ ಮಹದೇವಪ್ಪ ರವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು..ವಿದ್ಯಾರ್ಥಿಗಳಿಗೆ ತಂಬಾಕು ಇನ್ನಿತರ ಮಾದಕ ವಸ್ತುಗಳಿಂದ ಆಗುತ್ತಿರುವ ದುಷ್ಪರಿಣಾಮಗಳು ಬಗ್ಗೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಜೀವನದಲ್ಲಿ ನೆಮ್ಮದಿ ಕಂಡು ಕೊಳ್ಳಲು ಸಾಧ್ಯವಾಗುತ್ತಿಲ್ಲ ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದೆ ಇದರಿಂದ ಜಾಗೃತರಾಗಿ ದುಶ್ಚಟ ಮುಕ್ತರಾಗಿ ಮಾದರಿ ವಿದ್ಯಾರ್ಥಿ ಯಾಗುವಂತೆ ಮಾರ್ಗದರ್ಶನ ನೀಡಿದರು.. ಸಂಪನ್ಮೂಲ ವ್ಯಕ್ತಿ ಚಂದ್ರಶೇಖರಯ್ಯ ನಿವೃತ್ತ ಶಿಕ್ಷಕರು …
ಇಳಕಲ್ ತಾಲೂಕಿನಲ್ಲಿ ನಡೆಯುತ್ತಿರುವ 2111ನೇ ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಿಗೆ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ ಮಾರ್ಗದರ್ಶನ
ಇಳಕಲ್:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಧರ್ಮಸ್ಥಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ಬೆಳ್ತಂಗಡಿ ಸಹಯೋಗದಲ್ಲಿ ಹುನಗುಂದ ತಾಲೂಕಿನ 2111ನೇ ಮದ್ಯ ವರ್ಜನ ಶಿಬಿರ ಇಳಕಲ್‌ನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.ಶಿಬಿರದ ಐದನೇ ದಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಹಾಗೂ ಜನಜಾಗೃತಿ ವಿಭಾಗದ ನಿರ್ದೇಶಕ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಭೇಟಿ ನೀಡಿ, 66 ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಕುಡಿತದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ ಅವರು, ಮದ್ಯಮುಕ್ತ ಜೀವನದಿಂದ ಮಾತ್ರ ಸಮಾಜದಲ್ಲಿ ಗೌರವ, ಸ್ಥಾನಮಾನ …
ಸ್ವಾಸ್ತ್ಯ ಸಮಾಜದ ಸಂಕಲ್ಪವೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮುಖ್ಯ ಉದ್ದೇಶ – ವಿವೇಕ್
ಕಲಬುರಗಿ : ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿ,ಯುವ ಸಮುದಾಯಕ್ಕೆ ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಸಂಪೂರ್ಣ ಸಮಾಜದ ಸ್ವಾಸ್ತ್ಯ ಸಂಕಲ್ಪವೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ಮುಖ್ಯ ಉದ್ದೇಶವಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ಹೇಳಿದರು.ನಗರದ ಕೇಂದ್ರೀಯ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮಳೆಗೆ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಹಾಗೂ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾಸ್ಥ್ಯ …
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2112ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ
ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 2112ನೇ ಮದ್ಯವರ್ಜನ ಶಿಬಿರ ವ್ಯವಸ್ಧಾಪನ ಸಮಿತಿ, ಗೌರಿಬಿದನೂರು ಇವರ ಸಂಯುಕ್ತ ಆಶ್ರಯದಲ್ಲಿ*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಗೌರಿಬಿದನೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ,ಅಧ್ಯಕ್ಷರು, ಕಾರ್ಯದರ್ಶಿ, ಸುಮಂಗಲಿ ಕಲ್ಯಾಣ ಮಂಟಪ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ …
ಬೆಂಗಳೂರು ನಗರ ಮತ್ತು ಗ್ರಾಮಾಂತರದ ಯೋಜನಾ ವ್ಯಾಪ್ತಿಗಳ ಸ್ವಾಸ್ಥ್ಯಸಂಕಲ್ಪತರಬೇತುಧಾರರ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಂಗಳೂರು ಗ್ರಾಮಾಂತರ/ ಪೂರ್ವ ಜಿಲ್ಲೆ.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ / ಪೂರ್ವ ಜಿಲ್ಲೆ. ಇವರ ಸಂಯುಕ್ತ ಆಶ್ರಯದಲ್ಲಿ ಪರಮ ಪೂಜ್ಯ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ* ದೊಡ್ಡಬಳ್ಳಾಪುರ ಯೋಜನಾಕಛೇರಿ ಸಭಾಂಗಣದಲ್ಲಿ “ಬೆಂಗಳೂರು ಗ್ರಾಮಾಂತರ /ಪೂರ್ವ ಜಿಲ್ಲೆಗಳ ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ” ವನ್ನು ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ …
2109ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಮಾರ್ಗದರ್ಶನದಲ್ಲಿ, ಚಿತ್ರದುರ್ಗ ಜಿಲ್ಲಾ ಕಚೇರಿ ವ್ಯಾಪ್ತಿಯ ಚಿಕ್ಕಜಾಜೂರು ಯೋಜನಾ ಕಚೇರಿಯಲ್ಲಿ ಆಯೋಜಿಸಲಾಗಿರುವ 2109ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.ಮದ್ಯಪಾನದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಮದ್ಯವರ್ಜನೆಯ ಮಹತ್ವವನ್ನು ತಿಳಿಸುವುದು ಹಾಗೂ ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನದತ್ತ ಜನರನ್ನು ಪ್ರೇರೇಪಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಶ್ರೀ ನಾಗರಾಜ್ ಕುಲಾಲ್ ಅವರು, ಯೋಜನಾಧಿಕಾರಿಗಳು, ಜನಜಾಗ್ರತಿ ವಿಭಾಗ, ಚಿತ್ರದುರ್ಗ ಪ್ರಾದೇಶಿಕ ಕಚೇರಿ, ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಮ್ಮ ಭಾಷಣದಲ್ಲಿ ಮದ್ಯಪಾನವು ವ್ಯಕ್ತಿಯ ಆರೋಗ್ಯ, ಕುಟುಂಬದ ನೆಮ್ಮದಿ, ಆರ್ಥಿಕ …
ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಜಿಲ್ಲಾ ಮಟ್ಟದ ದ್ವಿತೀಯ ತ್ರೈಮಾಸಿಕ ಸಭೆ
ಹಾವೇರಿ: ಹಾವೇರಿ ಜಿಲ್ಲಾ ವ್ಯಾಪ್ತಿಯ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಜಿಲ್ಲಾ ಮಟ್ಟದ ದ್ವಿತೀಯ ತ್ರೈಮಾಸಿಕ ಸಭೆ ಇತ್ತೀಚೆಗೆ ನಡೆಯಿತು. ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಸ್ತುತ ವರ್ಷ ಧಾರವಾಡ ಪ್ರಾದೇಶಿಕ ವ್ಯಾಪ್ತಿಗೆ ‘ಚಾಂಪಿಯನ್ ಆಫ್ ದಿ ಚಾಂಪಿಯನ್’ ಗೌರವ ದೊರೆತಿರುವುದಕ್ಕೆ ಅವರು ಜನಜಾಗೃತಿ ವೇದಿಕೆಯ ಎಲ್ಲ ಸದಸ್ಯರನ್ನು ಅಭಿನಂದಿಸಿದರು. ಜನಜಾಗೃತಿ ಕಾರ್ಯಕ್ರಮದ ಕ್ರಿಯಾಯೋಜನೆ, ನಿಗದಿತ ಗುರಿಗಳು ಹಾಗೂ ಸಾಧನೆಗಳ ಕುರಿತು ಸಮಗ್ರ ವಿಮರ್ಶೆ ನಡೆಸಿದ ಅವರು, ಸಮುದಾಯದ ಏಳಿಗೆಗಾಗಿ ಕ್ಷೇತ್ರ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ …
ಚಿಕ್ಕನಾಯಕನಹಳ್ಳಿ ತಾಲ್ಲೋಕಿನ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಚಿಕ್ಕನಾಯಕನಹಳ್ಳಿ-2 (ಹುಳಿಯಾರು) ತಾಲ್ಲೋಕು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ತುಮಕೂರು-2 ಜಿಲ್ಲೆ ರವರ ಸಹಯೋಗದೊಂದಿಗೆಗಾಂಧಿ ಭವನ ಹುಳಿಯಾರು ನಲ್ಲಿ ಚಿಕ್ಕನಾಯಕನಹಳ್ಳಿ-2 (ಹುಳಿಯಾರು ) ತಾಲ್ಲೋಕಿನ ಪಾನಮುಕ್ತ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಹುಳಿಯಾರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಭಾಗ್ಯಮ್ಮ ರವರು ಸ್ವಾಗತಿಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಅಥಿತಿಗಳು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಉದ್ಗಾಟನೆ ಮಾಡಿದರು.ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ …
ಹಗರಿಬೊಮ್ಮನಹಳ್ಳಿಯಲ್ಲಿ 2108ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ
ಹಗರಿಬೊಮ್ಮನಹಳ್ಳಿಯಲ್ಲಿ 2108ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ಹಗರಿಬೊಮ್ಮನಹಳ್ಳಿ: ತಾಲೂಕಿನ ಶ್ರೀ ಸೇವಾಲಾಲ್ ಸಮುದಾಯ ಭವನದಲ್ಲಿ 2108ನೇ ಮಧ್ಯವರ್ಜನ ಶಿಬಿರವನ್ನು ಶ್ರೀ ಗುರು ಪರಮಪೂಜ್ಯ ಡಾ. ಮಹೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಗರಿಬೊಮ್ಮನಹಳ್ಳಿ ಶಾಸಕ ಸನ್ಮಾನ್ಯ ಶ್ರೀ ಕೆ. ನೇಮರಾಜ ನಾಯಕ ಅವರು ಉದ್ಘಾಟಿಸಿದರು.ಶಿಬಿರದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಶಿವಪ್ಪ ನಾಯಕ ಕವಾಲಿ, ಬಳ್ಳಾರಿ ಸೆಂಟ್ರಲ್ ಜೈಲ್ ಡಿವೈಎಸ್‌ಪಿ ಗುಜ್ಜಲ್ ಭೀಮೇಶ್, ವೈದ್ಯಾಧಿಕಾರಿ ಡಾ. ಪ್ರವೀಣ್, ಜೆಡಿಎಸ್ ಜಿಲ್ಲಾಧ್ಯಕ್ಷ ಮೃತ್ಯುಂಜಯ ಬಾದಾಮಿ ಹಾಗೂ …









